Mushik vahana vighneshwara - Bhakthi Geetha Lyrics
Singer | Bhakthi Geetha |
Mushik vahana vighneshwara song lyrics in Kannada - Bhakthi Geetha
ಮೂಶಿಕ ವಾಹನ ಮೋಹಕ ಹಸ್ತ
ಚಾಮರ ಕರ್ಣ ವಿಲಂಬಿತ
ಸೂತರ
ವಾಮನ ರೂಪ ಮಹೇಶ್ವರ ಪುತ್ರ
ವಿಘ್ನ ವಿನಾಶಕ ಪಾದ ನಮಸ್ತೆ
ನಮಸ್ತೆ ನಮಸ್ತೆ ನಮಃ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ನಿನ್ನ ನಂಬಿದ ಜನಕೆ ಇಹುದಯ್ಯ ಎಲ್ಲ ಸುಖ
ತಂದೆ ಕಾಯೊ ನಮ್ಮ ಕರಿಮುಖ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ಎಲ್ಲರೂ ಒಂದಾಗಿ ನಿನ್ನ
ನಮಿಸಿ ನಲಿಯೋದು ನೋಡೋಕೆ ಚೆನ್ನ
ಗರಿಕೆ ತಂದರೆ ನೀನು... ಊ ಆ
ಗರಿಕೆ ತಂದರೆ ನೀನು ಕೊಡುವೆ ವರವನ್ನ
ಗತಿ ನೀನೆ ಗಣಪನೆ ಕೈ ಹಿಡಿಯೊ ಮುನ್ನ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ಸೂರ್ಯನೆದುರಲ್ಲಿ ಮಂಜು ಕರಗುವ ರೀತಿ
ನಿನ್ನ ನೆನೆಯಲು ಒಡನೆ ಒಡುವುದು ಭೀತಿ
ಸೂರ್ಯನೆದುರಲ್ಲಿ ಮಂಜು ಕರಗುವ ರೀತಿ
ನಿನ್ನ ನೆನೆಯಲು ಒಡನೆ ಒಡುವುದು ಭೀತಿ
ನೀಡಯ್ಯ ಕಷ್ಟಗಳ ಗೆಲ್ಲುವ ಶಕ್ತಿ
ತೋರಯ್ಯ ನಮ್ಮಲ್ಲಿ ನಿನ್ನಯ ಪ್ರೀತಿ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲಾ ಬೆಳಗುವ ಬೆಳಕ ನಿನ್ನ ನಂಬಿದ ಜನಕೆ ಇಹುದಯ್ಯ ಎಲ್ಲ ಸುಖ ತಂದೆ ಕಾಯೊ ನಮ್ಮ ಕರಿಮುಖ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ಬೆನಕ ಬೆನಕ ಏಕದಂತ
ಪಚ್ಚೆಕಲ್ಲು ಪಾಣಿಮೆಟ್ಲು ಒಪ್ಪುವ ವಿಘ್ನೇಶ್ವರ
ನಿನಗೆ ಇಪ್ಪತೊಂದು ನಮಸ್ಕಾರಗಳು
0 Comments